Author Details

DR

Da Ra Bendre

ಕನ್ನಡದ ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರು ರಾಮಚಂದ್ರ ಬೇಂದ್ರೆ-ಅಂಬವ್ವನವರ ಪುತ್ರರಾಗಿ ೩೧-೧-೧೮೯೬ರಲ್ಲಿ ಧಾರವಾಡದಲ್ಲಿ ಜನಿಸಿದರು. ಧಾರವಾಡದಲ್ಲಿ ೧೯೧೩ರಲ್ಲಿ ಮೆಟ್ರಿಕ್ ಮುಗಿಸಿದ ಮೇಲೆ ಪುಣೆಯ ಫರ್ಗ್ಯುಸನ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ೧೯೧೮ರಲ್ಲಿ ಬಿ.ಎ. ಮಾಡಿದರು. ಕೆಲವು ಕಾಲ ಅಧ್ಯಾಪಕ ವೃತ್ತಿ ಮಾಡಿದ ಮೇಲೆ ೧೯೩೫ರಲ್ಲಿ ಮುಂಬಯಿ ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಗಳಿಸಿದರು. ಗದುಗಿನ ವಿದ್ಯಾದಾನ ಸಮಿತಿ ಪ್ರೌಢಶಾಲೆಯಲ್ಲಿ ಹೆಡ್ ಮಾಸ್ಟರ್ ಆಗಿ ಆಮೇಲೆ ೧೯೪೨ರಲ್ಲಿ ಹುಬ್ಬಳ್ಳಿಯ ನ್ಯೂ ಇಂಗ್ಲಿಷ್ ಸ್ಕೂಲಿನಲ್ಲಿ ಒಪ್ಪೊತ್ತಿನ ಶಿಕ್ಷಕರಾದರು. ೧೯೪೪ರಲ್ಲಿ ಸೊಲ್ಲಾಪುರದ ಡಿಎವಿ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ೧೯೪೪ರಲ್ಲಿ ನೇಮಕಗೊಂಡರು. ೧೯೫೬ರಲ್ಲಿ ನಿವೃತ್ತರಾದ ಮೇಲೆ ಧಾರವಾಡದ ಆಕಾಶವಾಣಿ ಕೇಂದ್ರದಲ್ಲಿ ಸಲಹೆಗಾರರಾಗಿ ಕೆಲಸ ಮಾಡಿದರು. ಮುಂಬಯಿಯಲ್ಲಿ ನಡೆದ ೨೧ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಅಧ್ಯಕ್ಷರಾಗಿದ್ದರು. ೧೯೩0ರಲ್ಲಿ ಮೈಸೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೇಖಕ ಗೋಷ್ಠಿಯನ್ನು ನಿರ್ವಹಿಸಿದರು. ಕೆಲವು ಕಾಲ ಜೀವನ ಮಾಸಪತ್ರಿಕೆ ಮತ್ತು ಜಯಕರ್ನಾಟಕ ಪತ್ರಿಕೆ ಸಂಪಾದಕರಾಗಿ ಸೇವೆ ಸಲ್ಲಿಸಿದರು. ಬೇಂದ್ರೆ ಅವರಿಗೆ ೧೯೬೮ರಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿತು. ೧೯೭೬ರಲ್ಲಿ ಕಾಶಿಯ ವಿದ್ಯಾಪೀಠವೂ ಗೌರವ ಡಾಕ್ಟರೇಟ್ ನೀಡಿತು. ಕೇಂದ್ರ ಸರ್ಕಾರ ೧೯೬೮ರಲ...
View Books

Top Books

HomeShop
Podcast
My Books
Cart