Author Details
PP
Patil Puttappa
ಪತ್ರಿಕೋದ್ಯಮ, ಸಾಹಿತ್ಯ ರಚನೆ ಮತ್ತು ಕನ್ನಡ ಹೋರಾಟದಲ್ಲಿ ಗಣ್ಯರಾದ ಪಾಟೀಲ ಪುಟ್ಟಪ್ಪನವರು `ಪಾಪು’ ಎಂದೇ ಪ್ರಸಿದ್ಧರಾಗಿದ್ದಾರೆ. ಇವರು ಹಾವೇರಿ ಜಿಲ್ಲೆಯ ಕುರುಬಗೊಂಡ ಗ್ರಾಮದಲ್ಲಿ ಸಿದ್ಧಲಿಂಗಪ್ಪ-ಮಲ್ಲಮ್ಮ ದಂಪತಿಗಳಿಗೆ ೧೪-೧-೧೯೨೨ರಲ್ಲಿ ಜನಿಸಿದರು. ಶಾಲಾ ಶಿಕ್ಷಣವನ್ನು ಹಲಗೇರಿ, ಬ್ಯಾಡಗಿ, ಚಿತ್ರದುರ್ಗ, ಹಾವೇರಿಗಳಲ್ಲಿ ಮುಗಿಸಿ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಪದವಿ ಪೂರೈಸಿ ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ಎಂ.ಎಂ.ಬಿ. ವ್ಯಾಸಂಗ ಮಾಡಿದರು. ೧೯೪೯ರಲ್ಲಿ ಕ್ಯಾಲಿಪೋರ್ನಿಯಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಎಂ.ಎಫ್.ಪಿ ಪದವಿ ಗಳಿಸಿದರು.
ವಿಶಾಲ ಕರ್ನಾಟಕ ಪತ್ರಿಕೆ ಸಂಪಾದಕರಾಗಿ ಕೆಲಸಮಾಡಿದ ಪುಟ್ಟಪ್ಪನವರು ಕ್ಯಾಲಿಫೋರ್ನಿಯಾಗೆ ಹೋಗಿ ಬಂದ ಮೇಲೆ ನವಯುಗ ಮಾಸಪತ್ರಿಕೆ ಸಂಪಾದಕರಾದರು. ಆಮೇಲೆ ೧೯೫೪ರಲ್ಲಿ ಪ್ರಪಂಚ ವಾರಪತ್ರಿಕೆಯನ್ನು ತಾವೇ ಹುಟ್ಟು ಹಾಕಿದರು. ೧೯೫೭ರಲ್ಲಿ ಸಂಗಮ ಎಂಬ ಕನ್ನಡ ಡೈಜಸ್ಟನ್ನು ಪ್ರಾರಂಭಿಸಿದರು. ೧೯೫೯ರಲ್ಲಿ ವಿಶ್ವವಾಣಿ ದಿನಪತ್ರಿಕೆಯನ್ನೂ ಮನೋರಮಾ ಎಂಬ ಚಲನಚಿತ್ರ ಮಾಸಿಕವನ್ನೂ ಆರಂಭಿಸಿದರು. ಹೀಗೆ ಪತ್ರಿಕೆಗಳನ್ನು ಹುಟ್ಟು ಹಾಕುತ್ತಲೂ ನಡೆಸುತ್ತಲೂ ಪತ್ರಿಕೋದ್ಯಮದಲ್ಲಿ ಹೊಸ ಹೊಸ ಪ್ರಯೋಗಗಳನ್ನು ಮಾಡಿದರು. ಇದರ ಜೊತೆಗೆ ಪ್ರಜಾವಾಣಿ ಪತ್ರಿಕೆಯಲ್ಲಿ, ಅನಂತರ ಕನ್ನಡಪ್ರಭ ಪತ್ರಿಕೆಯಲ್ಲಿ ಅಂಕಣಕಾರರಾಗಿ ಮಿಂಚಿದರು. ಹೀಗೆ ಪತ್ರಿಕಾ ಸಂಪಾದಕರಾಗಿ ನಾಡಿನ ಮನೆಮಾತಾದರು. ಇದಲ್ಲದೆ ಇತರ ಸಂಸ್ಥೆ...
View Books








