Author Details
PV
Prof Venkatasubbiah G
ಪ್ರೊ. ಗಂಜಾಂ ವೆಂಕಟಸುಬ್ಬಯ್ಯ (೨೩ ಆಗಸ್ಟ್ ೧೯೧೩ - ೧೯ ಏಪ್ರಿಲ್ ೨೦೨೧) ಕನ್ನಡದ ನಿಘಂಟುಶಾಸ್ತ್ರ, ಪ್ರಾಚೀನ ಸಾಹಿತ್ಯ ಅಧ್ಯಯನ, ಅನುವಾದ ಕ್ಷೇತ್ರಗಳಲ್ಲಿ ತಜ್ಞರು. ಇವರ 'ಇಗೋ ಕನ್ನಡ' ಎಂಬ ಪ್ರಜಾವಾಣಿ ಅಂಕಣ ಸಮಸ್ತ ಕನ್ನಡಿಗರಿಗೆ ಪರಿಚಿತವಾಗಿದೆ. ೧೯೯೧ರಿಂದ ವೆಂಕಟಸುಬ್ಬಯ್ಯನವರು ಈ ಅಂಕಣದ ಮೂಲಕ ಕನ್ನಡ ಭಾಷೆಯ ಪದಗಳನ್ನು ಓದುಗರಿಗೆ ಹತ್ತಿರಗೊಳಿಸಿದವರು. ಇವರ ಭಾಷಾ ಸಾಹಿತ್ಯ ಕೊಡುಗೆಗೆ ೨೦೦೫ರಲ್ಲಿ, ಹಂಪಿಯ ಕನ್ನಡ ವಿಶ್ವವಿದ್ಯಾಲಯವು ಇವರಿಗೆ ಪ್ರತಿಷ್ಠಿತ ನಾಡೋಜ ಪ್ರಶಸ್ತಿಯನ್ನು ನೀಡಿದೆ. ಇವರು ಬೆಂಗಳೂರಿನಲ್ಲಿ ನಡೆದ ೭೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
View Books