Author Details

RT

Rahamat Tarikere

ರಹಮತ್ ತರೀಕೆರೆ (ಆಗಸ್ಟ್ ೨೬, ೧೯೫೯) ಕರ್ನಾಟಕದ ಲೇಖಕ, ಚಿಂತಕ ಹಾಗೂ ವಿಮರ್ಶಕ. ಕನ್ನಡದ ಪ್ರಸಿದ್ಡ ಸಂಸ್ಕೃತಿ ಚಿಂತಕರು ಹಾಗೂ ವಿಮರ್ಶಕರಾದ ರಹಮತ್ ತರೀಕೆರೆ ಅವರು ಆಗಸ್ಟ್ ೨೬, ೧೯೫೯ರಂದು ತರೀಕೆರೆ ತಾಲೂಕಿನ ಸಮತಳದಲ್ಲಿ ಜನಿಸಿದರು. ಶಿವಮೊಗ್ಗೆಯ ಸಹ್ಯಾದ್ರಿ ಕಾಲೇಜಿನಲ್ಲಿ ಕನ್ನಡದ ವಿಷಯವನ್ನು ಆಯ್ಕೆ ಮಾಡಿಕೊಂಡು ಪ್ರಥಮ ಸ್ಥಾನ ಮತ್ತು ಚಿನ್ನದ ಪದಕಗಳೊಂದಿಗೆ ಪದವಿ ಪೂರೈಸಿದ ರಹಮತ್ ಅವರು, ಮುಂದೆ ಮೈಸೂರಿನ ಮಾನಸಗಂಗೋತ್ರಿಯಲ್ಲಿ 1983ರಲ್ಲಿ ಅದೇ ಮೇಲ್ಮಟ್ಟದ ಪ್ರಥಮ ಸ್ಥಾನ ಮತ್ತು ಏಳು ಸ್ವರ್ಣಪದಕಗಳ ಸಾಧನೆಯೊಂದಿಗೆ ಸ್ನಾತಕೋತ್ತರ ಪದವಿ ಪಡೆದರು. ಪ್ರೊ. ಎಚ್.ಎಂ.ಚನ್ನಯ್ಯನವರ ಮಾರ್ಗದರ್ಶನದಲ್ಲಿ 1988ರಲ್ಲಿ ಪಿಎಚ್.ಡಿ ಪದವಿ ಪಡೆದರು. ೧೯೮೩-೮೪ರ ವರ್ಷದಿಂದ ಶಿವಮೊಗ್ಗೆಯ ಸಹ್ಯಾದ್ರಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ವೃತ್ತಿ ಆರಂಭ ಮಾಡಿದ ರಹಮತ್ ತರೀಕೆರೆಯವರು 1992ರಿಂದ ಚಂದ್ರಶೇಖರ ಕಂಬಾರರ ಕರೆಯ ಮೇರೆಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾದರು. ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ ಹಾಗೂ ಭಾಷಾಕಾಯದ ಡೀನ್ ಆಗಿ ಅವರು ಸೇವೆ ಸಲ್ಲಿಸಿದರು. ಈಗ ಹಿರಿಯ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
View Books

Top Books

HomeShop
Podcast
My Books
Cart