Author Details
SN
Sumatheendra Nadig
ಕನ್ನಡದ ಪ್ರಮುಖ ಕವಿ ಮತ್ತು ವಿಮರ್ಶಕರಾಗಿ ಪ್ರಸಿದ್ಧರಾಗಿರುವ ಡಾ. ಸುಮತೀಂದ್ರ ನಾಡಿಗರು ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಮೇ ೪, ೧೯೩೫ರಂದು ಜನಿಸಿದರು. ಇಂಗ್ಲಿಷ್ ಮತ್ತು ಕನ್ನಡ ಸಾಹಿತ್ಯಗಳ ಪ್ರತಿಭಾವಂತ ವಿದ್ಯಾರ್ಥಿಯಾದ ನಾಡಿಗರು ಮೈಸೂರು ವಿಶ್ವವಿದ್ಯಾನಿಲಯದಿಂದ ಮತ್ತು ಅಮೆರಿಕದ ಫಿಲೆಡೆಲ್ಫಿಯಾ ವಿಶ್ವವಿದ್ಯಾಲಯಗಳಿಂದ ಇಂಗ್ಲಿಷ್ ಎಂ. ಎ. ಪದವಿಯನ್ನು ಪಡೆದರು. ೧೯೮೫ರಲ್ಲಿ, ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಕನ್ನಡದಲ್ಲಿ ಡಾಕ್ಟರೇಟ್ ಪಡೆದುಕೊಂಡ ನಾಡಿಗರು ತಮ್ಮ ಪ್ರೌಢ ಪ್ರಬಂಧಕ್ಕಾಗಿ ಆರಿಸಿಕೊಂಡಿದ್ದ ವಿಷಯ ‘ಬೇಂದ್ರೆಯವರ ಕಾವ್ಯದ ವಿಭಿನ್ನ ನೆಲೆಗಳು’. ಬೇಂದ್ರೆ, ಗೋಪಾಲಕೃಷ್ಣ ಅಡಿಗ ಮತ್ತು ಕೆ. ಎಸ್. ನರಸಿಂಹಸ್ವಾಮಿಯವರ ಕಾವ್ಯದ ಬಗ್ಗೆ ಸುಮತೀಂದ್ರ ನಾಡಿಗರು ವಿಶೇಷವಾದ ಅಧ್ಯಯನ ನಡೆಸಿದ್ದಾರೆ.
View Books